ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರನ್ನಾಗಿ ಮಾರುತಿ ರಾಮಚಂದ್ರ ಪೂಜಾರ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷರಾದ ಬಾಳೆ ದಾಸನಟ್ಟಿ ಆದೇಶ ಹೊರಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಪಕ್ಷ ಸಂಘಟನೆ ಬಲವರ್ಧನೆಗಾಗಿ ಶ್ರಮಿಸಲು ಆದೇಶದಲ್ಲಿ ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾರುತಿ ರಾಮಚಂದ್ರ ಪೂಜಾರ ಅವರಿಗೆ ಅಧಿಕೃತ ಆದೇಶ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ ಸೇರಿದಂತೆ ಇತರರು ಇದ್ದರು