ಕುಡಚಿ: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಪಲ್ಯಗಳನ್ನು ಜನರಿಗೆ ತಿಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ಸೈಕಲ್ ಜಾಥಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ನ್ನು ಜಿಲ್ಲೆಯ ಎಲ್ಲಾ ನಾಯಕರೊಂದಿಗೆ ಮತ್ತು ರಾಜ್ಯ ನಾಯಕರೊಂದಿಗೆ ಚರ್ಚಿಸಿ ನೀಡಲಾಗುವುದು. ಕಾರಣ ಎಲ್ಲರೂ ಇಂದಿನಿಂದಲೇ ಕಾಂಗ್ರೆಸ್ ಗೆಲುವಿಗಾಗಿ ಪಕ್ಷವನ್ನು ತಳ ಮಟ್ಟದಿಂದಲೇ ಸಂಘಟಿಸಬೇಕೆಂದು ತಿಳಿಸಿದರು.
ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ ನೀವು ಗಮನಿಸುತ್ತಿದ್ದು, ಕೆಲ ಬೆಳವಣಿಗೆಗಳು ಸಮಾಜದಲ್ಲಿ ಮತ್ತು ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಇವುಗಳನ್ನು ತಡೆಯಬೇಕಾದರೆ ಬಿಜೆಪಿಯನ್ನು ಸೋಲಿಸಲು ಪಣ ತೊಡಬೇಕೆಂದು ಸೂಚಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಕಾಂಗ್ರೆಸ್ ಸೀಟು ಗೆಲ್ಲಬೇಕೆಂದು ಈಗಾಗಲೇ ಶಾಸಕಿ ಲಕ್ಷ್ಮೀ ಹೆಬ್ಬಾಕರ್ ಸೇರಿದಂತೆ ಎಲ್ಲಾ ನಾಯಕರು ಶ್ರಮಿಸುತ್ತಿದ್ದು, ಇದಕ್ಕೆ ಕಾರ್ಯಕರ್ಯರು ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಮಾಜಿ ಸಚಿವ ವೀರಕುಮಾರ ಪಾಟೀಲ್, ಮಾಜಿ ಶಾಸಕ ಎಸ್.ಬಿ. ಘಾಟಗೆ, ಸುನೀಲ್ ಹನಮಣ್ಣವರ, ಯಲ್ಲಪ್ಪಾ ಸಿಂಗೆ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.