*ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ*

ಗೋಕಾಕ : ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಹಳ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಿ, ಹೆಚ್ಚಿನ ಅಂಕ ಗಳಿಸಿ ಸಂಸ್ಥೆಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು.

ನಗರದ ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಶಿಕ್ಷಕರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದು ವಿಧ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಆರ್ ಎಸ್ ಡುಮ್ಮಗೋಳ, ಡಿ ಡಿ ಹಾದಿಮನಿ, ಪಿ ಎಂ ಲಕ್ಸಟ್ಟಿ , ಎಸ್ ಎಸ್ ಮೆಣಸಗಿ, ಶ್ರೀಮತಿ ರಾಧಿಕಾ ರಾವಜಿ, ಐ ಸಿ ಚಂದ್ರಕನವರ ಹಾಗೂ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA