*ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ*
ಗೋಕಾಕ: ವಿಕಲಚೇತನರು ಎಲ್ಲರಂತೆ ಜೀವನದ ಪಯಣವನ್ನು ಮುನ್ನಡೆಸಬೇಕು ಎಂಬ ಉದ್ದೇಶವನ್ನಿರಿಸಿ ಅವರಿಗಾಗಿ ಯಂತ್ರಚಾಲಿತ ದ್ವಿಚಕ್ರ ವಿಶೇಷ ವಾಹನಗಳನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಹಿಲ್ ಗಾರ್ಡನ್ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಶನಿವಾರ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದರು.
ವಿಕಲಚೇತನರಿಗೆ ವಿದ್ಯಾಭ್ಯಾಸ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ದ್ವಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ವಿಕಲಚೇತನರು ಸಾಮಾನ್ಯ ನಾಗರಿಕರಂತೆ ಅವರೂ ಬದುಕುವುದರೊಂದಿಗೆ ತಮ್ಮ ಕುಟುಂಬವನ್ನು ಮುನ್ನಡೆಸಲು ಈ ವಾಹನವು ಸಹಕಾರಿಯಾಗಲಿ ಎಂದು ಅವರು ಹಾರೈಸಿದರು.
ಈ ವೇಳೆ ಜಿಲ್ಲಾ ವಿಕಲಚೇತನ ಕಲ್ಯಾಣ ಅಧಿಕಾರಿ ನ್ಯಾಮದೇವ ಬಿಲ್ಕಾರ, ತಾಲೂಕು ನೋಡೆಲ್ ಅಧಿಕಾರಿ ಹೊಳೇಪ್ಪ ಎಚ್, ಎಂ.ಆರ್ ಚಂದ್ರಕಾಂತ,ತಳವಾರ, ಚನ್ನಪ್ಪ ಸರಸ್ವತಿ, ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ವಿವಿಧ ಗ್ರಾಮದ ಮುಖಂಡರು ಇದ್ದರು.”