ಗೋಕಾಕ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಇವರ ಆಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದರು.

ನಗರದ ಸಭಾ ಭವನದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನೂರಾರು ಜನರಿಗೆ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡು ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಆಚರಿಸುವರು.
ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ರಿಯಾಜ್ ಚೌಗಲಾ, ಡಾ ಶ್ರೇಯಾ ರಾಯ್ಕರ್, ರೇಖಾ ಬೆನ್ನಿವಾಡ, ಜುಬೇರ್ ಮಿರ್ಜಾಬಾಯಿ, ರಾಹುಲ್ ಬಡೆಸಗೋಳ, ಧನಂಜಯ ಪೂಜಾರಿ, ಸತೀಶ್ ಕಡಕೋಳ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಸದಸ್ಯರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA