ಬೆಳಗಾವಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭೆಯ ಕಾರ್ಯ ಶ್ಲಾಘನೀಯವಾಗಿದ್ದು, ಮುಂದೆಯೂ ಹೆಚ್ಚಿನ ಕಾರ್ಯಕ್ರಮ ಸಮಾಜದ ವತಿಯಿಂದ ನಡೆಯಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಲಹೆ ನೀಡಿದರು.
ಬೆಳಗಾವಿ ನಗರದ ರೈಲ್ವೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಪ್ಪಾರ ಸಮಾಜದಲ್ಲಿ ಶೇ. 30 ಶೈಕ್ಷಣಿಕ ಸುಧಾರಣೆ ಕಂಡಿದೆ. ಕಾರಣ ಮೂಢನಂಬಿಕೆ, ಕಂದಾಚಾರದಿಂದ ಸಮಾಜ ಬಾಂಧವರು ಹೊರಬರಬೇಕು. ಅಂದಾಗ ಶೈಕ್ಷಣಿಕ ಪ್ರಗತಿ, ಸಮಾಜ ಸುಧಾರಣೆ ಸಾಧ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಮಠದ ಸ್ವಾಮೀಜಿಗಳು, ಸಂಸದ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ಶಂಕರಗೌಡ ಪಾಟೀಲ, ಸಂಜಯ ಪಾಟೀಲ, ವಿಷ್ಣು ಲಾತೂರ, ಸುರೇಶ ಲಾತೂರ, ಎಚ್.ಸಿ. ನೀರಾವರಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.