ಯಾದಗಿರಿ: ಸಂವಿಧಾನವೇ ನಮ್ಮ ದೇಶದ ಶ್ರೇಷ್ಠ ಗ್ರಂಥವಾಗಿದ್ದು, ಕಾರಣ ಸಂವಿಧಾನವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಜಿಲ್ಲೆಯ ವಡಗೇರಾ ಪಟ್ಟಣದ ಡಿ.ಡಿ.ಯು ಇಂಟರ್ ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ದಶಮಾನೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣ ಪಡೆದರೆ ಹುಲಿಯ ಹಾಲು ಕುಡಿದಂತೆ ಎಂದು ಹೇಳಿದ್ದಾರೆ. ಆದರೆ ಅವರೇ ಹೇಳಿದಾಗೆ ಶಿಕ್ಷಣ ಪಡೆದರೆ ಸಾಲದು, ಸಮಾಜದ ಸೇವೆಯಲ್ಲಿ ತೊಡಗಬೇಕು. ಅವಾಗ ಮಾತ್ರ ಶಿಕ್ಷಣ ಪಡೆದಿದ್ದಕ್ಕೆ ಸ್ವಾರ್ಥಕ ಆಗುತ್ತದೆ ಎಂದು ತಿಳಿಸಿದರು.
ಇಂದು ಸಮಾಜದಲ್ಲಿ ಜಾತಿ ವ್ಯವಸ್ಥೆ ಮಾರಕವಾಗಿದೆ. ವೈಯಕ್ತಿಕ ಸ್ವಾಂತತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದ್ದು, ಬಟ್ಟೆ ತೊಡಲು, ಆಹಾರ ತಿನ್ನುವ ಹಕ್ಕನ್ನು ಕಿತ್ತುಕೊಳ್ಳುತ್ತಾದ್ದಾರೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದ್ದು, ಇಂತಹ ಸಂಚು ರೂಪಿಸುವವರ ವಿರುದ್ಧ ಹೋರಾಟ ನಡೆಸಬೇಕೆಂದು ಕರೆ ನೀಡಿದರು.
ಡಿ.ಡಿ.ಯು ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಭಾಗದಲ್ಲಿ ಇನ್ನಷ್ಟು ಶಿಕ್ಷಣ ಸಂಸ್ಥೆಯ ಶಾಖೆಗಳು ಆರಂಭವಾಗಲಿ ಎಂದು ಹರಿಸಿದ ಅವರು, ಅಂಕ ಗಳಿಸುವುದು ಅಷ್ಟೇ ವಿದ್ಯಾರ್ಥಿಗಳ ಸಾಧನೆ ಅಲ್ಲ. ಎಲ್ಲಾ ರಂಗದ ಬಗ್ಗೆಯೂ ತಿಳಿದುಕೊಳ್ಳುವುದು ಅಗತ್ಯವಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಕೆಪಿಸಿಸಿ ಸದಸ್ಯ ಎ.ಸಿ. ಕಡ್ಲೂರ, ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಪಾಟೀಲ್ ಹುಲ್ಲರ್, ಡಿ.ಡಿ.ಯು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ. ಭೀಮಣ್ಣ ಮೇಟಿ, ಜಿಲ್ಲಾ ಅಹಿಂದ ಅಧ್ಯಕ್ಷ ಮೌಲಾಲಿ ಅನಪುರ ಸೇರಿದಂತೆ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.