ಬೆಳಗಾವಿ: ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ಪಷ್ಟಣೆ ನೀಡಿದ್ದು, ಈ ಕುರಿತು ಚರ್ಚೆಗೆ ಆಹ್ವಾನ ನೀಡುವ ಮೂಲಕ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.

ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಿಲಾದ ಬುದ್ಧ, ಬಸವ, ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಹಿಂದೂ ಪದದ ಅರ್ಥ ಬಗ್ಗೆ ಆಳವಾಗಿ ಅಧ್ಯಯನ ಮಾಡಬೇಕೆಂದು ಹೇಳಿಕೆ ನೀಡಿದರು. ಇದು ಚರ್ಚೆಗೆ ಗ್ರಾಸವಾಗಿ ಶಾಸಕ ಸತೀಶ ಜಾರಕಿಹೊಳಿ ಹಿಂದೂ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ಪಷ್ಟಣೆ ನೀಡಿದ್ದು, ಸಿಎಂ ಕಮೀಟಿ ರಚನೆ ಮಾಡಲಿ. ಈ ಸಮೀತಿ ಒಂದು ತಿಂಗಳಲ್ಲಿ ವರದಿ ಕೊಟ್ಟು, ಸಾಬೀತು ಮಾಡಲಿ ಎಂದು ಅವರು ಈ ಕುರಿತು ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ
CKNEWSKANNADA / BRASTACHARDARSHAN CK NEWS KANNADA