Breaking News

*ಸಿಎಂಗೆ ಪತ್ರ ಬರೆದು ತಮ್ಮ ಹೇಳಿಕೆ ಹಿಂದೆ ಪಡೆದ ಸತೀಶ್ ಜಾರಕಿಹೊಳಿ*


ಹಿಂದೂ ಶಬ್ದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆ ವಿಚಾರ

ಸಿಎಂಗೆ ಪತ್ರ ಬರೆದು ತಮ್ಮ ಹೇಳಿಕೆ ಹಿಂದೆ ಪಡೆದ ಸತೀಶ್ ಜಾರಕಿಹೊಳಿ

ಸಿಎಂ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪತ್ರ

ನಿಪ್ಪಾಣಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ

ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ

ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ

ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ

ಸಿಎಂ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪತ್ರ.

ಅಷ್ಟೇ ಅಲ್ಲದೇ ತಮ್ಮ ಹೇಳಿಕೆ ಬಗ್ಗೆ ತನಿಖಾ ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಬೆಳಗಾವಿ: ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಒಂದು ತನಿಖಾ ಸಮಿತಿ ರಚಿಸಿ, ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ಸೃಷ್ಠಿಸಿದವರ ಮೇಲೆ ತನಿಖೆ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರವನ್ನು ರವಾನಿಸಿದ್ದಾರೆ.

 

 

 

ದಿ. 06-11-2022 ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಮ್ಮಿಕೊಂಡಿದ್ದ ಮನೆ ಮನೆಗೆ ಬುದ್ದ, ಬಸವ, ಅಂಬೇಡ್ಕರ್‌ ವಿನೂತನ ಕಾರ್ಯಕ್ರಮದಲ್ಲಿ ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು..? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 

ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಠಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಶಾಸಕ ಸತೀಶ್‌ ಜಾರಕಿಹೊಳಿ: ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ