ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಉದ್ಘಾಟಿಸಿದರು
ನಂತರ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಇಂತಹ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲರಿಗೂ ಅಭಿನಂದನೆಗಳು. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ನಿರಂತರ ಇಂತಹ ಪಂದ್ಯಾವಳಿಗಳನ್ನು ಆಯೋಜಿಸುವ ಅವಶ್ಯಕತೆ ಇದೆ. ಇಂದಿನ ಯುವಕರು ಭಾರತದ ಮುಂದಿನ ಭವಿಷ್ಯ ಎನ್ನಲಾಗುತ್ತಿದೆ. ಹೀಗಾಗಿ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಶದ ಭವಿಷ್ಯವನ್ನು ರೂಪಿಸಬೇಕು. ಬುದ್ಧ ಬಸವ ಅಂಬೇಡ್ಕರ್ ಅವರ ದಾರಿಯಲ್ಲಿ ನಡೆಯುವ ಮೂಲಕ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.
ನಂತರ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿಕೂಡ್ಲಿಗಿ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಿದ ರಾಹುಲ್ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಬೈಕ್ ರ್ಯಾಲಿ ಮೂಲಕ ಅಭಿಮಾನಿಗಳು ವಿಶೇಷವಾದ ಸ್ವಾಗತಿಸಿದರು.