ಬೆಳಗಾವಿ: ಭ್ರಷ್ಟಾಚಾರ, ಆಡಳಿತ ನಿಷ್ಕ್ರಿಯತೆ ಸೇರಿದಂತೆ ಸರ್ಕಾರದ ವಿವಿಧ ಧೋರಣೆಗಳನ್ನು ವಿರೋಧಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮದ್ ನಲಪಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಬಿ.ಎಸ್. ಯಡಿಯೂರಪ್ಪ ಮಾರ್ಗದಿಂದ ಅಲಾರವಾಡ ಕ್ರಾಸ್ ವರೆಗೂ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಉತ್ತರ ಕರ್ನಾಟಕ ಆಶೋತ್ತರಗಳಿಗೆ ಧ್ವನಿಯಾಗಬೇಕೆಂಬ ಉದ್ದೇಶದಿಂದ ಸುರ್ವಣಸೌಧ ನಿರ್ಮಿಸಲಾಗಿದೆ. ಆದರೆ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನೆರವೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿನ ಅನೇಕ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರು ಉದ್ಘಾಟನೆ ಮಾಡಲು ಹೊರಟಿದ್ದಾರೆ. ಸರ್ಕಾರದ ನಡೆಗೆ ಜನರು ಬೇಸತ್ತಿದ್ದಾರೆ. ಈ 40 % ಸರ್ಕಾರಕ್ಕೆ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಯುವ ಜನತೆ ತಿರುಗೇಟು ನೀಡುತ್ತಾರೆ ಎಂದು ಕಿಡಿಕಾರಿದರು.
ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲ್ಪಾಡ್ ಮಾತನಾಡಿ, ಬಿಜೆಪಿ ಮೊದಲು ನಮ್ಮ ಉದ್ಯೋಗ ಕಸಿದುಕೊಂಡಿದೆ. ಈಗ ಚಿಲುಮೆ ಎಂಬ ಸಂಸ್ಥೆ ಮೂಲಕ ನಮ್ಮ ವೋಟ್ ಕದಿದೆ ಎಂದು ಕಿಡಿ ಹಾಕಿದರು. ಸರ್ಕಾರದ ವಿರುದ್ಧ ಮಾತನಾಡಲು ಜನ ಭಯ ಪಡುವಂತಾಗಿದೆ. ಈ 40% ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಯುತ್ ಕಾಂಗ್ರೆಸ್ ಸುಮ್ಮನಿರುವುದಿಲ್ಲ ಎಂದು ಗುಡುಗಿದರು.
40% ವಿರುದ್ಧ ಧ್ವನಿ ಎತ್ತಿದ ಗುತ್ತಿಗೆದಾರ ಸಂಘದ ಅಧ್ಯಕ್ಷರನ್ನು ಬಂಧಿಸಿದರು. ಈ ಸರ್ಕಾರ ಪ್ರತಿ ಹಂತದಲ್ಲೂ ಸ್ಕಾಮ್ ಮಾಡುತ್ತಿದೆ. ಈ ಅಧಿವೇಶನ ಮಾಡುತ್ತಿರುವುದು ಜನರ ಸಮಸ್ಯೆ ಆಲಿಸಲು ಅಲ್ಲ. ಅವರ 4೦% ಕಮಿಷನ್ ಬಗ್ಗೆ ಮಾತಾಡಲು. ಹಾಗಾಗಿ ಇದನ್ನು ಖಂಡಿಸಿ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲಾಗುತ್ತಿದೆ ಎಂದರು.
ಪ್ರತಿಭಟನಾ ಮೆರವಣಿಗೆ ಅಲಾರವಾಡ ಕ್ರಾಸ್ ಬಳಿ ತಲುಪುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಪೊಲೀಸ್ ತಂಡ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ್ ಪಾಟೀಲ , ಸೀತಲ್ ಮಠಪತಿ, ಯುವ ಕಾಂಗ್ರೆಸ್ ರಾಜ್ಯಪದಾಧಿಕಾರಿಗಳು ಹಾಗೂ ಇತರರು ಇದ್ದರು