ಬೆಳಗಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆಧ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಿಪ್ಪಾಣಿ ತಾಲೂಕಿನ ಕೊಗನೊಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿ, ಸರ್ಕಾರಕ್ಕೆ ಸರಿಸಮನಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ಸಾರ್ವಜನಿಕರು ಸಹಕಾರ ಸಂಘಗಳಲ್ಲಿ ಸಾಲ ಪಡೆದ ಜನರು ನಿಗದಿತ ಅವಧಿಯಲ್ಲಿ ಮರು ಪಾವತಿಸಿ ಸಂಘ ಅಭಿವೃದ್ದಿಗೆ ಕೈ ಜೋಡಿಸಬೇಕು ಎಂದರು.
ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು, ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿ ಹೊರಬೇಕು. ಅಲ್ಲದೇ ಸಂಘದಿಂದ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಲು ರೈತ ಸಮುಹ ಮುಂದಾಗಬೇಕು ಎಂದು ತಿಳಿ ಹೇಳಿದರು.
ಈ ವೇಳೆ ಮಾಜಿ ಸಚಿವ ವೀರಕುಮಾರ ಪಾಟೀಲ ಮಾತನಾಡಿ, ರೈತ ಸಮುದಾಯದ ಆರ್ಥಿಕ ಭದ್ರತೆಗೆ ಹೊಂದಲು ಸಹಕಾರ ಸಂಘಗಳು ಪ್ರಮುಖ ಪಾತ್ರವಾಗಿದ್ದು, ಇಂತಹ ಸಂಘಗಳನ್ನು ಉಳಿಸಿ ಬೆಳೆಸಿ ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವುದು ನಮ್ಮಲ್ಲರ ಕರ್ತವ್ಯವಾಗಿದೆ ಎಂದರು.ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ಅವರನ್ನು ವೇದಿಕೆ ಮೇಲಿದ್ದ ಗಣ್ಯರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಿಪ್ಪಾಣಿ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಪಂ ಮಾಜಿ ಉಪಾಧ್ಯಕ್ಷ ಪಂಕಜ ಪಾಟೀಲ, ತಾಪಂ ಮಾಜಿ ಸದಸ್ಯ ಪ್ರಿತಮ್ ಪಾಟೀಲ, ಕೊಗನೊಳಿ ಗ್ರಾಪಂ ಅಧ್ಯಕ್ಷೆ ಛಾಯಾ ಸಂಜಯ ಪಾಟೀಲ, ಕೂಗನೊಳ್ಳಿ ಗ್ರಾಪಂ ಉಪಾಧ್ಯಕ್ಷ ತುಕಾರಾಮ ಶಿಂದೆ, ಕೊಗನೊಳಿಪಿಕೆಪಿಎಸ್ ಅಧ್ಯಕ್ಷ ಅನಿಲ ಚೌಗಲೆ, ಸೆಕ್ರೆಟರಿ ಕೃಷ್ಣಾತ ನಿಕಾಡೆ, ಬಾಳಾಸಾಹೇಬ ಕಾಗಲೆ, ಜಗನ್ನಾಥ ಖೋತ, ಕೇಶವ ಪಾಟೀಲ, ರವೀಂದ್ರ ಪಾಟೀಲ, ಬಿರಸೂ ಕೋಳೆಕರ,ಜಹಂಗೀರ ಕಮತೆ, ಅಶೋಕ ಕಮತೆ, ಪುಷ್ಪವತಿ ಪಾಟೀಲ, ಸುಲೋಚನಾ ಮಗದುಮ,ಪ್ರವೀಣ ದಾವಣೆ ಸೇರಿದಂತೆ ಕೊಗನೊಳಿ ಗ್ರಾಮದ ಹಿರಿಯ ಮುಖಂಡರು ಇದ್ದರು.