ಹೊಸದಿಲ್ಲಿ: ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಬುಟಾ ಸಿಂಗ್ (86) ಅವರು ಶನಿವಾರ ವಿಧಿವಶವರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಜಲೋರ್-ಸಿರೋಹಿ ಸಂಸದೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದ ಬುಟಾ ಸಿಂಗ್ ಅವರು, ಲಕ್ಷಾಂತರ ಬೆಂಬಲಿಗರನ್ನು ಹೊಂದಿದ್ದಾರೆ. ಬುಟಾ ಸಿಂಗ್ ಅವರ ಅಗಲಿಕೆ ಹಿನ್ನೆಲೆಯಲ್ಲಿ ಅವರ ಬೆಂಬಲಗರ ಆಕ್ರಂದನ ಮುಗಿಲು ಮುಟ್ಟಿದೆ.
ಇಂದಿರಾ ಗಾಂಧಿ ಅವರ ಸಂಪುಟದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕ ಇವರಾಗಿದ್ದರು. 86 ವರ್ಷದ ಬುಟಾ ಸಿಂಗ್ ಬಿಹಾರ ಮತ್ತು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕರಾದ ಬುಟಾ ಸಿಂಗ್ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ಸಂಸದೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ ಬುಟಾ ಸಿಂಗ್ ಅವರು, ಲಕ್ಷಾಂತರ ಬೆಂಬಲಿಗರನ್ನು ಹೊಂದಿದ್ದರು, ಅಲ್ಲದೆ ಅನುಭವಿ ಆಡಳಿತಗಾರ ಮತ್ತು ಬಡವರ ಕಲ್ಯಾಣಕ್ಕಾಗಿ ದೀನ ದಲಿತರ ಧ್ವನಿಯಾಗಿದ್ದರು. ಅವರ ನಿಧನ ತೀವ್ರ ನೋವನ್ನುಂಟು ಮಾಡಿದೆ.
– ಕೆಪಿಸಿಸಿ ಕಾರ್ಯಧ್ಯಕ್ಷರು , ಸತೀಶ್ ಜಾರಕಿಹೊಳಿ.