ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ 13 ನೂತನ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನೂತನ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಮಾತನಾಡಿದ ಶಾಸಕರು, ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರು ಅಭಿವೃದ್ದಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಂತಹ ಪ್ರಾಮಾಣಿಕ ಕೆಲಸ ಮಾಡುವ ಮೂಲಕ ಜನರ ಕಷ್ಟಗಳಿಗೆ ಸ್ಪಂಧಿಸಬೇಕು ಎಂದು ಸಲಹೆ ನೀಡಿದರು.
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಹಳ್ಳಿಯಿಂದ ದಿಲ್ಲಿವರೆಗೂ ಕಾಂಗ್ರೆಸ್ ಮತ್ತೆಅಧಿಕಾರಕ್ಕೆ ಶ್ರಮಿಸಲಾಗುತ್ತಿದೆ. ಕಾರ್ಯಕರ್ತರು ಕೈಜೋಡಿಸಿ ಪಕ್ಷಕ್ಕೆ ಬಲ ತುಂಬಬೇಕು ಎಂದು ಹೇಳಿದರು.
ಗಣಪತಿ ಮಿರ್ಜಿ, ಅಶೋಕ ಪಟ್ಟೇದ್, ಮಾಯಪ್ಪ ಸಿಂಗಾಡಿ, ಆನಂದ ಪಾಟೀಲ್, ವೆಂಕಪ್ಪ ನಾಯಕ, ಲೋಕೇಶ ಬಂಡಿವಡ್ಡರ್, ರಾಜು ಬಾಗಾರ, ಹಣುಮಂತ ಚಿಂಚಲಿ ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಈ ಸಂದರ್ಭದಲ್ಲಿ ಜಿಪಂ ಉಪಾದ್ಯಕ್ಷ ಅರುಣ ಕಟಾಂಬಳೆ, ಜಯಶ್ರೀ ಮಾಳಗಿ ರಾಮದುರ್ಗ ಕಾಂಗ್ರೆಸ್ ಮುಖಂಡರಾದ ರಾಜೇಂದ್ರ ಪಾಟೀಲ್, ಕಲ್ಲಣ್ಣ ಬಟಕುರ್ಕಿ, ಅಣ್ಣಿಗೇರಿ ರಮೇಶ ಹುಲಕುಂದ ಮಯಂತಾದವರು ಇದ್ದರು.
CKNEWSKANNADA / BRASTACHARDARSHAN CK NEWS KANNADA