ಬೆಳಗಾವಿ : 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹಾಂತೇಶ ಕೌಜಲಗಿ, ಮೂರು ಬಾರಿ ಗೆದ್ದಿರುವ ಗಣೇಶ ಹುಕ್ಕೇರಿ ಅಥವಾ ಅವರ ತಂದೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಹಿಳಾ ಕೋಟಾದಲ್ಲಿ ಲಕ್ಷ್ಮೀ ಹೆಬ್ಬಾಳಕರ್, ಕೂಡ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.
ಶನಿವಾರ ಸಂಜೆ ಕುವೆಂಪು ನಗರದ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಲಕ್ಷ್ಮಣ ಸವದಿ ಸೇರಿದಂತೆ ಗೆದ್ದ ಶಾಸಕರು ಸಭೆ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ಲಿಂಗಾಯತ ಸಮುದಾಯದ 7 ಜನ ಲಿಂಗಾಯತ ಶಾಸಕರು ಗೆದ್ದು ಬಂದಿದ್ದು, ಇದರಲ್ಲಿ 6 ಜನರು ಹೊಸಬರು ಇದ್ದಾರೆ. ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳ ಪ್ರಕಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸಂಪುಟದಲ್ಲಿ ಉತ್ತಮ ಸ್ಥಾನಮಾನ ದೊರೆಯುವ ಸಾಧ್ಯತೆಗಳಿವೆ. ಬಿಜೆಪಿ ಸರ್ಕಾರದ ಅವಧಿಯ ಒಂದು ಕಾಲದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರು. ಶ್ರೀಮಂತ ಪಾಟೀಲ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಶಶಿಕಲಾ ಜೊಲ್ಲೆ. ಆದರೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನಗಳು ದೊರೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ