ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.
ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಚಾರವಲ್ಲ. ಯಾರೇ ಸಿಎಂ ಇದ್ದರೂ ನಮ್ಮ ಸಂಘಟನೆ-ಹೋರಾಟ ಮುಂದುವರೆಯುತ್ತದೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲು ಸಂಘಟನೆ ನಡೆಯುತ್ತದೆ ಎಂದರು.
ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ರೇಸ್ ನಲ್ಲಿದ್ದಾರೆ ನಿಜ. ಅವರ ಹಿಂದೆ ಇನ್ನೂ ಬಹಳಷ್ಟು ಜನ ಕ್ಯೂನಲ್ಲಿದ್ದಾರೆ. ಅವರು ಆದ ಮೇಲೆ ನಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇವೆ ಎಂದು ತಿಳಿಸಿದರು.
CKNEWSKANNADA / BRASTACHARDARSHAN CK NEWS KANNADA