ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದಂತ ಪ್ರಕರಣ ನಡೆದಿತ್ತು. ಈ ಘಟನೆಯಿಂದಾಗಿ ಸಂತ್ರಸ್ತ ಮಹಿಳೆ ಆಘಾತಕ್ಕೂ ಒಳಗಾಗಿದ್ದರು. ಅಂತಹ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದರಿಂದ ಯುವತಿಯ ಕುಟುಂಬಸ್ಥರು ಕೋಪಗೊಂಡು, ಯುವಕನ ಮನೆಗೆ ನುಗ್ಗಿ, ಅವರ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು.
ಈ ಪ್ರಕರಣ ಸಂಬಂಧ 9 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಹಲವರನ್ನು ಬಂಧಿಸಲಾಗಿತ್ತು. ಈ ಘಟನೆಯ ಬಳಿಕ ನಾಪತ್ತೆಯಾಗಿದ್ದಂತ ಜೋಡಿ, ಬೆಳಗಾವಿ ಪೊಲೀಸ್ ಆಯುಕ್ತರ ಮುಂದೆ ಹಾಜರಾಗಿ, ತಮಗೆ ರಕ್ಷಣೆ ನೀಡುವಂತೆ ಕೋರಿದ್ದರು.
ಇದೀಗ ಈ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಂಚಿಕೊಂಡಿದ್ದು, ವಂಟಮೂರಿ ಗ್ರಾಮದಲ್ಲಿ ನಡೆದಂತ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ 50 ಸಾವಿರ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಮೂಲಕ ರಾಜ್ಯ ಸರ್ಕಾರರಿಂದ ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದಂತ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆಗೆ ಪರಿಹಾರವನ್ನು ಘೋಷಣೆ ಮಾಡಿದೆ.