ಕಲಬುರಗಿ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ. ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದಿದ್ದಾರೆ.
ನಾನು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರ ಟ್ವೀಟ್ ನೋಡಿದ್ದೇನೆ. ಸ್ಟೇಟ್ಮೆಂಟ್ ಕೊಡೋದ್ರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗಲ್ಲ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಗಡಿ ವಿಚಾರ ಬಂದಾಗ ನಮ್ಮ ಪಕ್ಷದ ವತಿಯಿಂದ ಯಾವುದೇ ಮೃದು ಧೋರಣೆ ತೋರಿಲ್ಲ. ತೋರಿಸುವುದು ಇಲ್ಲ ಎಂದು ಹೇಳಿದರು.
CKNEWSKANNADA / BRASTACHARDARSHAN CK NEWS KANNADA