ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಹಾಗೂ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿಯವರ ಆಶೀರ್ವಾದದಿಂದ ನನ್ನಗೆ ಲೋಕಸಭೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಆದಕಾರಣ ತಾವಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕುರಣಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ಯುವಕರ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದ್ದು, ಭಾರತ ದೇಶವನ್ನು ನಾವು ಯಂಗ್ ನೇಷನ್ ಎಂದು ಕರೆಯುತ್ತಿದ್ದೇವೆ. ಮುಖ್ಯವಾಗಿ ಯುವಕರು ದೇಶ ಕಟ್ಟುವುದರಲ್ಲಿ ಸಮರ್ಥರು, ಆದರಿಂದ್ದ ಜಿಲ್ಲೆಯ ಪಕ್ಷದ ಸರ್ವ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸಾಧನೆಯನ್ನು ಪ್ರತಿ ಮನೆ ಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷ ಬೆಂಬಲಿಸುವಂತೆ ಮಾಡಬೇಕು ಎಂದರು.
ಕ್ಷೇತ್ರದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗಬೇಕಾದರೆ ಕಾಂಗ್ರೆಸ್ ಬೆಂಬಲಿಸಬೇಕು. ಸದ್ಯ ರಾಜ್ಯದಲ್ಲಿ ಪಕ್ಷದ ಪರ ಅಲೆಯಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆೆ. ಈ ಭಾರಿ ಕ್ಷೇತ್ರದ ಮತದಾರರು ಪ್ರಜ್ಞಾವಂತಿಕೆಯನ್ನು ಮೆರೆಯಬೇಕು. ಆದ್ದರಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಒಂದು ಭಾರಿ ಅವಕಾಶ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳನ್ನು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು. ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದವರು ಕಾಂಗ್ರೆಸ್, ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದವರು ಕಾಂಗ್ರೆಸ್ . ಹೀಗಾಗಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ನನ್ನ ಗೆಲುವಿಗೆ ಕಾರ್ಯಕರ್ತರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಕುರಣಿ ಗ್ರಾಮದ ಹಿರಿಯ ಮುಖಂಡರು, ಯುವಕರು, ಮಹಿಳಾ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.