Breaking News

ಕ್ಷೇತ್ರದ ಜನರ ಸೇವೆ ಮಾಡಲು ಪ್ರಿಯಂಕಾಗೆ ಮತ ನೀಡಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ


ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರಿಗೆ ಅವಕಾಶ ಸಿಕ್ಕಿದೇ , ನಮ್ಮ ತಂದೆಯವರಿಗೆ ತೋರಿದ ಅಭಿಮಾನ- ಬೆಂಬಲ ನಿಮ್ಮ ಮನೆ ಮಗಳಾದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಆಶೀರ್ವಾದ ಮಾಡಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.

ರಾಯಬಾಗ ವಿಧಾನಸಭಾ ಕ್ಷೇತ್ರದ ಜಲಾಲಪೂರ ಹಾಗೂ ದಿಗ್ಗೇವಾಡಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದರು.

ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದ ಅವರು, ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ ಸತೀಶ ಜಾರಕಿಹೊಳಿ ಫೌಂಡೇಶನ್‌ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳನ್ನು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು ಎಂದರು.

 ಬೇರುಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಸಿದ್ದರಾಗಬೇಕು. ಸಹೋದರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಮುಂದಾಗಬೇಕು. ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದವರು ಕಾಂಗ್ರೆಸ್, ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದವರು ಕಾಂಗ್ರೆಸ್ . ಹೀಗಾಗಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ಸಹೋದರಿ ಆಯ್ಕೆ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೋಹಿತೆ ಹಾಗೂ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ