ಗೋಕಾಕ : ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸುವ ಹಿನ್ನಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಚೇರಿ ಮ್ಯಾನೇಜರ್ ವಿ ಆರ್ ಪರಸನ್ನವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತಸಹಾಯಕರಾದ ಪಾಂಡು ಮಣ್ಣಿಕೇರಿ ,ವಿನೋದ್ ಡೊಂಗ್ರಿ ಪಾಂಡು ರಂಗಸುಬ್ಬಿ ಪ್ರಕಾಶ ಬಸಾಪುರೆ ಸುರೇಶ ಮುದ್ದಪ್ಪಗೋಳ ಹಾಗೂ ಮುಖಂಡರಾದ ವಿವೇಕ ಜತ್ತಿ ಮಹೇಶ ಚಿಕ್ಕೋಡಿ ಪ್ರವೀಣ್ ಗುಡ್ಡಕಾಯಿ ಮಲ್ಲು ಪತ್ತಾರ ಬಸು ಹಾಗೂ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.