ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಮಾಡಲಾಯಿತು. ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
1857ರಲ್ಲಿ ನಡೆದ ಪ್ರಥಮ ಸ್ವಾತಂತ್ರ ಸಂಗ್ರಾಮದ ಕಿಚ್ಚು ಹೊತ್ತಿಸುವಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಪಾತ್ರ ಪ್ರಮುಖವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಹೇಳಿದರು.
ಬ್ರಿಟಿಷರ ವಿರುದ್ಧ ಹೋರಾಡಿ ದೇಶಾಭಿಮಾನ ಮೆರೆದ ಚನ್ನಮ್ಮ ಅವರ ತ್ಯಾಗ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿ ಹಾಗೂ ಶಕ್ತಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಮ್ಯಾನೇಜರ್ ವಿಠ್ಠಲ ಪರಸನ್ನವರ, ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ವಿನೋದ್ ಡೊಂಗರೆ, ಮಹಾಲಿಂಗ ಸಾಯನ್ನವರ, ಪ್ರಕಾಶ್ ಬಸ್ಸಾಪುರೆ, ಸುರೇಶ ಮುದ್ದಪ್ಪಗೋಳ , ಮುಂಜು ಸೇರಿದಂತೆ ಹಿಲ್ ಗಾರ್ಡನ್ ಕಚೇರಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.