ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡಿದರು.
ದಾಸಶ್ರೇಷ್ಠ ಕನಕದಾಸರು ರಚಿಸಿದ ಕೃತಿಗಳು ಅಂದು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ್ದಲ್ಲದೆ ಪ್ರಸ್ತುತ ದಿನಗಳಲ್ಲಿಯೂ ಸಹ ಸಮಾಜದ ಸಾಮಾಜಿಕ ಜಾಗೃತಿಗೆ ಪ್ರಮುಖ ಪಾತ್ರ ವಹಿಸುತ್ತವೆ. 1509 ರಲ್ಲಿ ಜನಿಸಿದ್ದ ಕನಕದಾಸರು 1609 ರಲ್ಲಿ ಕಾಗಿನೆಲೆಯಲ್ಲಿ ಇಹಲೋಕ ತ್ಯಜಿಸಿದರು. ಸಮಾಜದ ಒಳಿತಿಗಾಗಿ ಅವರು ಮಾಡಿದ ಸೇವೆ ಕಂಡು ಕಾಗಿನೆಲೆಯಲ್ಲಿ ಅವರ ಗದ್ದುಗೆ ಕೂಡ ನಿರ್ಮಿಸಲಾಗಿದೆ. ಅಂದು ಕನಕದಾಸರು ರಚಿಸಿದ ನಳಚರಿತ್ರೆ, ಮೋಹನತರಂಗಿಣಿ, ರಾಮಧಾನ್ಯ ಚರಿತ ಮತ್ತು ಹರಿಭಕ್ತಿಸಾರ ಕೃತಿಗಳು ಕನ್ನಡ ಸಾಹಿತ್ಯದ ಶ್ರೇಷ್ಠ ಕೃತಿಗಳಾಗಿವೆ. ಅವರು ಕಾಗಿನೆಲೆ ಆದಿಕೇಶವನ ಅಂಕಿತನಾಮದಲ್ಲಿ ರಚಿಸಿದ ಕೀರ್ತನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ ಎಂದು ತಿಳಿಸುವ ಮೂಲಕ ಜಯಂತಿ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಅರವಿಂದ್ ಕಾರ್ಚಿ, ವಿನೋದ್ ಡೊಂಗರೆ, ಪಾಂಡು ರಂಗಸುಬೆ, ಸುರೇಶ್ ಮುದ್ದಪ್ಪಗೋಳ ಹಾಗೂ ಮುಖಂಡರಾರ ವಿಠ್ಠಲ ಹೂವನ್ನವರ ಹಾಗೂ ಹಿಲ್ ಗಾರ್ಡನ್ ಸಿಬ್ಬಂದಿಗಳು ಉಪಸ್ಥಿತರಿದ್ದರು