ರಾಯಬಾಗ: ರಾಯಬಾಗದಲ್ಲಿರುವ ವಕೀಲರ ವಿವಿಧ ಬೇಡಿಕೆಗಳನ್ನು ಹಂತ- ಹಂತವಾಗಿ ಈಡೇರಿಸಲಾಗುವುದು. ಅಲ್ಲದೇ ನಮ್ಮ ಸರ್ಕಾರದ ಅವಧಿಯಲ್ಲಿ ನ್ಯಾಯಾಲಯ ಹಾಗೂ ವಕೀಲರ ಸಂಘಕ್ಕೆ ಮೂಲ ಸೌಕರ್ಯ ಒದಗಿಸಲು ಪ್ರಮುಖ ಪಾತ್ರ ವಹಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.
ರಾಯಬಾಗ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ನ್ಯಾಯವಾದಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ ಸಚಿವರು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ವಕೀಲರ ಸಂಘದ ಯಾವುದೇ ಸಮಸ್ಯೆಗಳಿದ್ದರೂ ಈಡೇರಿಸಲಾಗುವುದು. ಈಗಾಗಲೇ ಕಳೆದ ಬಾರೀ 1.5 ಕೋಟಿ ರೂ. ಅನುದಾನ ನೀಡಲಾಗಿದೆ. ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಲಿ, ವಕೀಲರ ಸಂಘವು ಹೆಚ್ಚಿನ ಏಳಿಗೆ ಕಾಣಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಅಮೀತ ಘಾಟಗೆ, ನ್ಯಾಯವಾದಿಗಳು ಇತರರು ಇದ್ದರು.