ಶಿವಮೊಗ್ಗ : ಜಿಲ್ಲೆಯ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದಿರುವ ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಈ ರೀತಿ ದುರ್ಘಟನೆಗಳು ನಡೆಯದಂತೆ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು.
ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA