Breaking News

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಅವರು ಅಧಿಕಾರ ಸ್ವೀಕಾರ


ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಇಂದು ಪದಗ್ರಹಣ ಮಾಡಿದರು.

ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳು ಇದೇ ವೇಳೆ ಪದಗ್ರಹಣ ಮಾಡಿದರು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ ಎಂದು ಘೋಷಣೆ ಮಾಡಿದರು.

ಮಹಿಳೆಯರು ನಿಮ್ಮಲ್ಲೇ ಜಗಳವಾಡದೇ ಪಕ್ಷಕ್ಕಾಗಿ ದುಡಿಯಿರಿ. ಮಹಿಳೆಯರೂ ದುಡಿದರೆ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುಲಿದೆ. ಆಗ ದೇಶದಲ್ಲಿ ಕಾಂಗ್ರೆಸ್ ಧ್ವಜ ಹಾರಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಟೀಕೆಗಳು ಬರುತ್ತವೆ, ಸಾಯುತ್ತದೆ. ಆದರೆ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಅವರು ಕಿವಿಮಾತು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದವರೇ ನಾಯಕ. ಬೂತ್ನಲ್ಲಿ ಎಲ್ಲರನ್ನು ಮೆಂಬರ್ ಮಾಡಬೇಕು. ಅಪರ್ಣಾ ಮನೋಭಾವದಿಂದ ಕೆಲಸ ಮಾಡಬೇಕು. ಗೆದ್ದ ತಕ್ಷಣ ಲೀಡರ್ ಅಲ್ಲ, ಮತ ಹಾಕಿದವನೇ ನಾಯಕ ಎಂದು ಯುವ ಕಾರ್ಯಕರ್ತರಿಗೆ ಡಿಸಿಎಂ ಸಲಹೆ ನೀಡಿದರು.

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಡಿಕೆಶಿ: ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಕಾಂಗ್ರೆಸ್‌ನ ನಿರ್ಗಮಿತ ಅಧ್ಯಕ್ಷ ಮಹಮ್ಮದ್ ನಲಪಾಡ್, ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರಿಸಿ ಅಧಿಕಾರ ವರ್ಗಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಲಪಾಡ್, ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನ ಹಾಗೂ ಬೆಂಬಲವಿಲ್ಲದೆ ತಾವು ಯುವ ಕಾಂಗ್ರೆಸ್ ಅಧ್ಯಕ್ಷರಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಸ್ಮರಿಸಿದರು. ರಾಜಕೀಯದಲ್ಲಿ ಒಬ್ಬ ಒಳ್ಳೆಯ ನಾಯಕನ ಅವಶ್ಯಕತೆ ಇರುತ್ತದೆ ಮತ್ತು ತಮಗೆ ಡಿ.ಕೆ. ಶಿವಕುಮಾರ್ ಅವರಂತಹ ನಾಯಕ ಸಿಕ್ಕಿದ್ದು ಅದೃಷ್ಟ ಎಂದರು.

ತಾವು ಅಧ್ಯಕ್ಷರಾಗುವ ಸಂದರ್ಭದಲ್ಲಿ ತಮ್ಮ ವಿರುದ್ಧ ಕಾರ್ಯನಿರ್ವಹಿಸಿದ್ದವರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲು ಯಶಸ್ವಿಯಾದ್ದಾಗಿ ಅವರು ತಿಳಿಸಿದರು. ಹೊಸ ಅಧ್ಯಕ್ಷ ಮಂಜುನಾಥ್ ಗೌಡರೂ ಸಹ ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಹೋಗುವಂತೆ ಸಲಹೆ ನೀಡಿದರು.

ಈ ಸಂರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್ ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು, ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ವಿನಯ್ ಕುಮಾರ್ ಸೊರಕೆ, ವಿ.ಆರ್.ಸುದರ್ಶನ್, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳ್ಕರ್‌, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ನಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ