Breaking News

ಘಟಪ್ರಭಾ ನೂತನ ಸೇತುವೆ ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ


ಬೆಳಗಾವಿ: ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯನ್ನು ನೆಲಸಮ ಮಾಡಲಾಗಿದ್ದು, ನೂತನ ಸೇತುವೆಯನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಪರಿನಾಮ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ ಪೂರ್ಣಗೊಳಿಸಬೇಕು. ಇದೇ ವೇಳೆ, ದಿನನಿತ್ಯದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನೂ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ವೇಗವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ವಿವಿಧ ಅಧಿಕಾರಿಗಳು ಹಾಗೂ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಒಂದೇ ಕೇಸ್ ಗೆ 200 ವಕೀಲರ ವಕಾಲತ್ತು; ಅಪರೂಪ ಕ್ಷಣಕ್ಕೆ ಸಾಕ್ಷಿಯಾದ ಮೂಡಲಗಿ ಕೋರ್ಟ್…!

ಬೆಳಗಾವಿ : ಕೋರ್ಟ್ ನಲ್ಲಿ ನಡೆದ ಒಂದು ಪ್ರಕರಣಕ್ಕೆ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲಿಸಿ ಕೋರ್ಟ್ ಕಲಾಪದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ