ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಕನ್ನಡ, ನಾಡು, ನುಡಿ ಹೋರಾಟದಲ್ಲಿ ಮಂಡ್ಯ ಜಿಲ್ಲೆ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್ . ಜಗದೀಶ್, ಕಾಂಗ್ರೆಸ್ ಮುಂಖಡರಾದ ಸುಧಾ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ರು.
CKNEWSKANNADA / BRASTACHARDARSHAN CK NEWS KANNADA