ಮೂಡಲಗಿ : ತಾಲ್ಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಲಕ್ಕವ್ವ ಅಡಿವೇಪ್ಪ ಹಾದಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಸಿದ್ದಪ್ಪ ಹೊಳೆಕರ ಅವಿರೋಧವಾಗಿ ಗುರುವಾರ ಆಯ್ಕೆಯಾದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ವಡೇರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರು ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಶಾಸಕರಿಗೆ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಮುರಳಿ ವಜ್ಜರಮಟ್ಟಿ, ಚಂದ್ರು ಮೊಟೆಪ್ಪಗೋಳ, ಸಿದ್ಲಿಂಗ ಗಿಡೋಜಿ, ಗಣಪತಿ ಪೂಜೇರಿ, ದಿಲೀಪ ಭಜಂತ್ರಿ, ಸುರೇಶ ಪಾಟೀಲ, ಅರ್ಜುನ ಕರ್ಜಗಿ, ಮಲ್ಲು ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.