ಹರಿಹರ (ರಾಜನಹಳ್ಳಿ): “ವಾಲ್ಮೀಕಿ ಸಮುದಾಯದ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ” ಎಂದು ಸತೀಶ್ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ವಾಲ್ಮೀಕಿ ಜಾತ್ರೆ ಅಂಗವಾಗಿ ಮಾಜಿ ಸಚಿವ ಚಳ್ಳಕೇರಿ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಅವರು ಮಾತನಾಡಿದರು.
“ಸಮುದಾಯದ ಮಹಿಳೆಯರಲ್ಲಿ ಶಿಕ್ಷಣದ ಕೊರತೆ ಇದೆ. ಪಾಲಕರು ಗಂಡು ಮಕ್ಕಳ ಜೊತೆಗೆ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ಕೊಡಿಸಬೇಕು” ಎಂದು ಸಲಹೆ ನೀಡಿದರು.
“ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಬೆ ಅಡಗಿರುತ್ತದೆ. ಮಕ್ಕಳಲ್ಲಿನ ಪ್ರತಿಭೆ ಹೊರತರಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಪ್ರತಿಭಾವಂತ ಮಕ್ಕಳಿಗೆ ಉತ್ತಮ ವೇದಿಕೆ ಒದಗಿಸಿಕೊಡಬೇಕು” ಎಂದು ಹೇಳಿದರು.
“ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯವಾಗಿದೆ. ಹೀಗಾಗಿ, ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು’ ಎಂದರು.
CKNEWSKANNADA / BRASTACHARDARSHAN CK NEWS KANNADA