ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು.
ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ ಮಾಜಿ ಸದಸ್ಯೆ ಜಯಶ್ರೀ ಮಾಳಗಿ, ಮುಖಂಡರಾದ ಸಂಜು ನಾಯಿಕ, ಬೂಪಾಲ ಅತ್ತು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
CKNEWSKANNADA / BRASTACHARDARSHAN CK NEWS KANNADA