Breaking News

ಮಹಿಳೆಯರಿಗೆ ಹೆಚ್ಚು ಅವಕಾಶಗಳು ಸಿಗಲಿ: ಪ್ರಿಯಾಂಕಾ ಜಾರಕಿಹೊಳಿ.


ಬೆಳಗಾವಿ: “ಡಾ.ಬಿ.ಆರ್. ಅಂಬೇಡ್ಕರ್ ಅವರಿಂದ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ದೊರೆತಿದೆ” ಎಂದು ಸತೀಶ ಶುಗರ್ಸ್ ನಿರ್ದೇಶಕಿ ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅಭಿಪ್ರಾಯಪಟ್ಟರು.

ತಾಲೂಕಿನ ಹುದಲಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಹಿಳೆಯರಿಗೆ ಸಮಾನತೆ ದೊರಕಿಸಿಕೊಡುವಲ್ಲಿ ಅಂಬೇಡ್ಕರ್ ಅವರ ಪಾತ್ರ ಪ್ರಮುಖ. ಮಹಿಳೆಯರಿಗೆ ಶೈಕ್ಷಣಿಕ, ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಸ್ಥಾನಮಾನ ಕೊಡಿಸಲು ಅಂಬೇಡ್ಕರ್ ಅವರು ನಿರಂತರವಾಗಿ ಹೋರಾಟ ನಡೆಸಿದರು. ಸಂವಿಧಾನದ ಮೂಲಕ ಎಲ್ಲ ಸೌಲಭ್ಯಗಳು ಮಹಿಳೆಯರಿಗೆ ಸಿಗುವಂತೆ ಮಾಡಿದರು. ಹೀಗಾಗಿ, ಎಲ್ಲ ಮಹಿಳೆಯರು ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಅವರು ತೋರಿರುವ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು” ಎಂದು ಹೇಳಿದರು.

ಮಹಿಳೆಯರಿಗೆ ಹೆಚ್ಚು ಅವಕಾಶಗಳು ಸಿಗಲಿ:

“ಮಹಿಳಾ ದಿನಾಚರಣೆ ಎಂದರೇ ಹಬ್ಬವಲ್ಲ. ಕೇವಲ ಸಂಭ್ರಮಿಸುವ ದಿನವೂ ಅಲ್ಲ. ಆಚರಣೆಯ ಮುಖ್ಯ ಉದ್ದೇಶ ಈ ದಿನ ಮಹಿಳೆಯರ ಸ್ಥಾನಮಾನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಅವರ ಸಮಗ್ರ ಬೆಳವಣಿಗೆಗೆ ಬೇಕಾದ ಕ್ರಮ ಕೈಗೊಂಡು ಅದನ್ನು ವರ್ಷವಿಡಿ ಅನುಷ್ಠಾನಗೊಳಿಸುವ ಮೂಲಕ ಮಹಿಳೆಯರ ರಕ್ಷಣೆ, ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸುವುದಾಗಿದೆ” ಎಂದರು.

“ಹಿಂದೆ ಮಹಿಳೆಯರು ಮನೆ ಹಾಗೂ ಕುಟುಂಬಕ್ಕೆ ಸೀಮಿತವಾಗಿ, ವಿವಿಧ ಕಟ್ಟುಪಾಡುಗಳನ್ನು ಪಾಲಿಸುತ್ತಾ ಬದುಕಬೇಕಿತ್ತು. ಆದರೆ, ಈ ಶತಮಾನದಲ್ಲಿ ಮಹಿಳೆಯರ ಪಾತ್ರ ಬದಲಾಗಿದೆ.ಇಂದು ಮಹಿಳೆ ವೃತ್ತಿ, ಸಂಸಾರ ಎರಡನ್ನೂ ನಿಭಾಯಿಸಬಲ್ಲಳು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು, ಆರ್ಥಿಕ, ರಾಜಕೀಯ, ಆಡಳಿತ ಕ್ಷೇತ್ರಗಳಲ್ಲಿ ಬಹುದೊಡ್ಡ ಸಾಧನೆಯನ್ನೇ ಮಾಡುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. ಮಹಿಳೆಯರಿಗೆ ಹೆಚ್ಚು ಅವಕಾಶಗಳು ದೊರೆತು, ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ” ಎಂದು ಪ್ರಿಯಾಂಕಾ ಹೇಳಿದರು.

ಸಾಧಕಿಯರಿಗೆ ಸನ್ಮಾನ:

ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ಗ್ರಾಮದ ವಿದ್ಯಾರ್ಥಿನಿಯರನ್ನು, ಹುದಲಿ ಗ್ರಾಮ ಪಂಚಾಯ್ತಿಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಪ್ರಿಯಾಂಕಾ ಅವರು ಸನ್ಮಾನಿಸಿದರು.

ಗ್ರಾಮಸ್ಥರ ಪರವಾಗಿ ವೇದಿಕೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸತ್ಕರಿಸಲಾಯಿತು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿದ್ಯಾ ಭದ್ರಕಾಳಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಮಲ್ಲವ್ವ ಬುಡ್ರಿ, ತುಮ್ಮರಗುದ್ದಿ ತಾಪಂ ಸದಸ್ಯೆ ಲಗಮವ್ವಾ ಗುಜನಾಳ, ಬೆಳಗಾವಿ ಎಪಿಎಂಸಿ ಉಪಾಧ್ಯಕ್ಷೆ ಮಹಾದೇವಿ ಖಣಗಣ್ಣಿ, ಪ್ರಗತಿಪರ ಚಿಂತಕಿ ಚೈತ್ರಿಕಾ ನಾಯಕ, ಉಪನ್ಯಾಸಕಿ ಆಶಾ ಯಮಕನಮರಡಿ, ಮುಖಂಡರಾದ ಜಯಶ್ರೀ ಮಾಳಗಿ, ಕಲ್ಪನಾ ದೋಶಿ ಇದ್ದರು.

ಕಾರ್ಯಕ್ರಮದಲ್ಲಿ ಮಹಿಳೆಯರು, ಯುವತಿಯರು ಸೇರಿ ಹುದಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ