ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಬಹುಮಾನ ವಿತರಣೆ
ಗೋಕಾಕ : ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬಹುಮಾನ ವಿತರಣೆ ಮಾಡಿದರು.
ತಾಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ನಿಮಿತ್ತ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಈ ಸಂದರ್ಭದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಮಾತನಾಡಿ ದಿನನಿತ್ಯದ ಕೆಲಸದ ಒತ್ತಡ ನಿವಾರಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಯುವಕರು ಕ್ರೀಡೆಗಳಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯ ಅಲ್ಲ ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು, ನಾವು ನಮ್ಮ ಕುಟುಂಬದವರು ಸದಾ ಕ್ರೀಡೆ ಹಾಗೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತೇವೆ ಎಂದು ತಿಳಿಸಿದರು
ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಣವ್ ಸೂಪರ್ ಕಿಂಗ್ಸ್ ವಿಜೇತರಾಗಿದ್ದು, ನಂದಿ ವಾರಿಯರ್ಸ್ ತಂಡ ರನ್ನರ್ ಆಫ್ ಪಡೆದು ಕೊಂಡಿದ್ದು ಈ ತಂಡಗಳಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬಹುಮಾನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಊರಿನ ಮುಖಂಡರು, ರೈತರು, ಯುವಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.