ಗೋಕಾಕ: ಯುವ ನಾಯಕ ಸಂತೋಷ ಜಾರಕಿಹೊಳಿಯವರ ನೇತೃತ್ವದ ಸೌಭಾಗ್ಯಲಕ್ಷ್ಮಿ ಶುಗರ್ಸ್ ನಲ್ಲಿ ಕೆಲ ದಿನಗಳ ಹಿಂದೆ ಕಬ್ಬು ನುರಿಸಲು ಪ್ರಾರಂಭ ಮಾಡಲಾಗಿತ್ತು. ಇಂದು ಈ ವರ್ಷದ ಮೊದಲನೇ ಸಕ್ಕರೆ ಉತ್ಪಾದನೆಯಾಗಿದ್ದು, ಇದಕ್ಕೆ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಸುಪುತ್ರ ಸೂರ್ಯ ಶ್ರೇಷ್ಠ ಜಾರಕಿಹೊಳಿ ಅವರು ಪೂಜೆ ನೆರವೇರಿಸಿದರು.
ಕಡಿಮೆ ಅವಧಿಯಲ್ಲಿ ಗರಿಷ್ಠಮಟ್ಟದ ಸಕ್ಕರೆ ಉತ್ಪಾದನೆ ಮಾಡಿದ್ದಕ್ಕೆ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಲೀಕರು ಕುಟುಂಬ ಸಮೇತ ಕಾರ್ಖಾನೆಗೆ ಆಗಮಿಸಿದ್ದಕ್ಕೆ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.