Breaking News

ಉನ್ನತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ: ಆರೋಗ್ಯಸ್ವಾಮಿ ಎ.ಕೆ


ಗೋಕಾಕ ಸೆ 4 :ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಬಿಸಿಇ ,ಸಿಸಿಎ ಕಾಲೇಜ ಧಾರವಾಡದ ಪ್ರಾಚಾರ್ಯ ಆರೋಗ್ಯಸ್ವಾಮಿ ಎ.ಕೆ ಹೇಳಿದರು.

ಶನಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಸಭಾಂಗಣದಲ್ಲಿ ನಡೆದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ ಗೋಕಾಕ ಕೊನೆಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಮತ್ತು ಪಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದುಡ್ಡು ಕೆಟ್ಟದಲ್ಲ ದುಡ್ಡು ಮಾಡುವ ದಾರಿಗಳು ಕೆಟ್ಟ ಮತ್ತು ಒಳ್ಳೆಯದಾಗಿವೆ. ಅವರುಗಳನ್ನು ಅರಿತುಕೊಂಡು ನಾವು ನಮ್ಮ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ದಿಸೆಯಲ್ಲಿ ಹೆಚ್ಚಿನ ಜನರು ದುಡ್ಡು ಗಳಿಸುವ ನೆಪದಲ್ಲಿ ದಾರಿ ತಪ್ಪುವ ಉದಾಹರಣೆಗಳು ಸಾಕಷ್ಟಿವೆ. ವಿದ್ಯಾರ್ಥಿ ಜೀವನದಲ್ಲಿ ಇದರ ಬಗ್ಗೆ ಯೋಚನೆ ಮಾಡದೆ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ಹೊಂದಿ ವಿದ್ಯಾಭ್ಯಾಸ ಮಾಡಿದರೆ ಒಳ್ಳೆಯ ಭವಿಷ್ಯವನ್ನು ಕಂಡುಕೊಳ್ಳಬಹುದು. ನಮ್ಮನ್ನು ನಾವು ಎಷ್ಟು ಪ್ರೀತಿಸುತ್ತೇವೆ ಅಷ್ಟೇ ಪ್ರೀತಿ ಬೇರೆಯವರ ಬಗ್ಗೆ ತೋರಿಬೇಕು. ಬೇರೆಯವರ ಭವಿಷ್ಯದ ಬಗ್ಗೆ ವಿಚಾರ ಮಾಡದೆ ತಮ್ಮ ಭವಿಷ್ಯದ ಬಗ್ಗೆ ವಿಚಾರ ಮಾಡಿದರೆ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯ, ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳತ್ತಿದ್ದಾರೆ. ಆಧುನಿಕ ಯಂತ್ರಗಳನ್ನು ಸದುಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಉಜ್ವಲಗೋಳಿಸಿಕೊಳ್ಳಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ , ತಮ್ಮ ಅನುಭವಗಳನ್ನು ಹಂಚಿಕೊಂಡರು. ಉಪನ್ಯಾಸಿಕಿ ಅಕ್ಷತಾ ಬೆಣ್ಣಿ ಸ್ವಾಗತಿಸಿದರು, ಕಾರ್ಯಕ್ರಮವನ್ನು ವಿದ್ಯಾರ್ಥಿ ಹರೀಶ ಹೊನ್ನಳಿ ನಿರೂಪಿಸಿ, ವಂದಿಸಿದರು

ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಈಟಿ , ಆಡಳಿತಾಧಿಕಾರಿ ಅಡಿವೇಶ ಗವಿಮಠ ಹಾಗೂ ಆಡಳಿತ ಮಂಡಳಿ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ