
ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು ವೆಬ್ಸೈಟ್ ಮತ್ತು ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಇದರೊಂದಿಗೆ ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಆಗಸ್ಟ್ 10 ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಿದ್ದು ವಿದ್ಯಾರ್ಥಿಗಳ ಮೊಬೈಲ್ ಫೋನ್ ಗೆ ಎಸ್‌ಎಂಎಸ್ ಮೂಲಕ ಸಂದೇಶ ರವಾನಿಸಲಾಗುವುದು. ಮನೆಯಲ್ಲೇ ಕುಳಿತುಕೊಂಡು ವಿದ್ಯಾರ್ಥಿಗಳು ಫಲಿತಾಂಶ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
kseeb.kar.nic.in ಅಥವಾ karresults.nic.in ವೆಬ್ಸೈಟ್ನಲ್ಲಿ ರಿಸಲ್ಟ್ ಲಭ್ಯ.
CKNEWSKANNADA / BRASTACHARDARSHAN CK NEWS KANNADA