Breaking News

ಎರಡೂ ಕೈಗಳಿಲ್ಲದಿದ್ದರೂ ಕೌಶಿಕ್ SSLC ಯಲ್ಲಿ ಫಸ್ಟ್‌ ಕ್ಲಾಸ್‌ ಪಾಸ್‌.


ಮಂಗಳೂರು : ಎರಡೂ ಕೈಗಳಿಲ್ಲದಿದ್ದರೂ ಕಾಲಿನಿಂದಲೇ SSLC ಪರೀಕ್ಷೆ ಬರೆದು ಶ್ಲಾಘನೆಗೆ ಪಾತ್ರವಾಗಿದ್ದ ಕೌಶಿಕ್ ಪರೀಕ್ಷೆಯಲ್ಲಿ ಮೆಚ್ಚುಗೆಯ ಅಂಕ ಪಡೆದಿದ್ದಾರೆ.
ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ ಕೌಶಿಕ್ ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಅಂಕ ಗಳಿಸಿದ್ದಾರೆ.
ಕನ್ನಡದಲ್ಲಿ 96, ಆಂಗ್ಲ ಭಾಷೆಯಲ್ಲಿ 50, ಸಂಸ್ಕೃತದಲ್ಲಿ 83, ಗಣಿತದಲ್ಲಿ 63, ವಿಜ್ಞಾನದಲ್ಲಿ 54, ಸಮಾಜದಲ್ಲಿ 78 ಅಂಕ ಗಳಿಸಿದ್ದು, ಒಟ್ಟು 424 ಅಂಕಗಳು ಕೌಶಿಕ್ ಗೆ ಬಂದಿವೆ. 
ಫಲಿತಾಂಶ ದಿಂದ ಖುಷಿಗೊಂಡ ಕೌಶಿಕ್, ಪಿಯುಸಿ ವಾಣಿಜ್ಯ ವಿದ್ಯಾಭ್ಯಾಸ ನಡೆಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಬಡತನವಿದ್ದರೂ ಹುಟ್ಟುವಾಗಲೇ ತನ್ನೆರಡೂ ಕೈಗಳಲ್ಲಿ ವೈಕಲ್ಯಗಳಿದ್ದರೂ ಕೌಶಿಕ್ ಯಾರ ಸಹಾಯವೂ ಇಲ್ಲದೆ ಕಾಲಿನ ಬೆರಳಲ್ಲೇ ಬರೆಯಲು ಕಲಿತಿದ್ದಾರೆ.

ಕಾಲಿನ ಸಹಾಯದಲ್ಲೇ ಮಣ್ಣಿನ ಕಲಾಕೃತಿ ರಚಿಸುವುದು, ಡ್ಯಾನ್ಸ್ ಮಾಡುವುದು, ಸೈಕಲ್ ನಲ್ಲಿ ಸವಾರಿ, ಈಜು ಈತನ ಆಸಕ್ತಿಯ ವಿಷಯಗಳಾಗಿದೆ.

ಫಲಿತಾಂಶ ಪ್ರಕಟವಾದ ನಂತರ ಶಿಕ್ಷಣ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ