Breaking News

8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ಸಿಗುವುದು ಅನುಮಾನ!


ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ.

2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ ಲಾಕ್ ಡೌನ್, ಅನುದಾನದ ಕೊರತೆ ಕಾರಣಗಳಿಂದಾಗಿ ಸೈಕಲ್ ವಿತರಣೆ ಕೈಬಿಡಲಾಗಿತ್ತು.

ಈ ಬಾರಿಯೂ ಸೈಕಲ್ ವಿತರಣೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.ಪ್ರತೀ ವರ್ಷ ಆಗಸ್ಟ್ ವೇಳೆಗೆ ಸೈಕಲ್ ವಿತರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಭೌತಿಕ ತರಗತಿ ಆರಂಭವಾಗುವ ಸಾಧ್ಯತೆ ಇಲ್ಲ. ಹೀಗಾಗಿ ಈ ಬಾರಿಯೂ ಸೈಕಲ್ ವಿತರಣೆಗೆ ಬ್ರೇಕ್ ಬೀಳಲಿದೆ ಎನ್ನಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ