Breaking News

ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!


ಬೆಂಗಳೂರು : ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆ 4.30 ಕ್ಕೆ ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶ ನೋಡಲು ನೋಂದಣಿ ಸಂಖ್ಯೆ ಪಡೆದುಕೊಳ್ಳಬೇಕು. ಇಲಾಖೆ ವೆಬ್ ಸೈಟ್ ನಲ್ಲಿ ‘Know my registration number’ಲಿಂಕ್ ನೀಡಿ ಆ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದು ಎಂದು ಹೇಳಿದರು.

ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿ ಎಲ್ಲಾ ವಿದ್ಯಾರ್ಥಿಗಳನ್ನ ಸರ್ಕಾರ ಪಾಸ್ ಮಾಡಿತ್ತು. ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲು ವಿದ್ಯಾರ್ಥಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಶೇ.10 ಇಂಟರ್ನಲ್ ಅಸೆಸ್ಮೆಂಟ್ ಅಂಕಗಳ ಆಧಾರದಲ್ಲಿ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ ಎಂದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ