ನವದೆಹಲಿ : ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ.
ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ.
ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಪರೀಕ್ಷೆಗಳು ಆಗಸ್ಟ್ನಲ್ಲಿ ನಡೆಯಲಿವೆ. ಹಾಗೆ, ಮೊದಲ ವರ್ಷದ ಕೋರ್ಸ್ ಆಗಸ್ಟ್ 30ಕ್ಕೆ ಪೂರ್ಣಗೊಳ್ಳಲಿದೆ.
https://twitter.com/DrRPNishank/status/1308295048602165249?s=19
ಕರೊನಾ ಕಾರಣಕ್ಕೆ ಹಣಕಾಸು ತೊಂದರೆ ಅನುಭವಿಸುತ್ತಿರುವ ಪಾಲಕರ ಅನುಕೂಲಕ್ಕಾಗಿ, ಅವರೇನಾದರೂ ವಿದ್ಯಾರ್ಥಿಗಳ ಅಡ್ಮಿಷನ್ ಕ್ಯಾನ್ಸಲ್ ಮಾಡಿದರೆ ಅಥವಾ ಬೇರೆ ಕಾಲೇಜುಗಳಿಗೆ ಪ್ರವೇಶ ಬಯಸಿದರೆ, ಅವರು ಕಟ್ಟಿರುವ ಪೂರ್ಣಶುಲ್ಕವನ್ನು ಕಾಲೇಜು ಆಡಳಿತ ಮಂಡಳಿ ಹಿಂದಿರುಗಿಸಬೇಕು. ಆದರೆ, ಈ ವಿನಾಯಿತಿ ನವೆಂಬರ್ 30ರ ತನಕ ಮಾತ್ರ ಲಭ್ಯ ಎಂದು ಮಾರ್ಗಸೂಚಿ ತಿಳಿಸಿದೆ. ಇದನ್ನು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಂಕ್ ಅವರು ಟ್ವೀಟ್ ಮಾಡಿದ್ದಾರೆ.