ಗೋಕಾಕ್:ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿಸಿದರು .
ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.