Breaking News

ಯುಗಾದಿ ಸಂದರ್ಭದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರೈಲು ಸೇವೆ ಪ್ರಾರಂಭಿಸುವಂತೆ ಪತ್ರಕರ್ತ ಉಮೇಶ್ ನಂದಗಾಂವ ಮನವಿ


ಸಾವಳಗಿ: ಉಮೇಶ್ ನಂದಗಾಂವ ಪತ್ರಕರ್ತರು ಮನವಿ ಪ್ರತಿ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಆಂಧ್ರ ಪ್ರದೇಶದಲ್ಲಿರುವ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಶ್ರೀ ಶೈಲ್ ಮಲ್ಲಿಕಾರ್ಜುನ ದರ್ಶನಕ್ಕೆ

ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ನೇರ ರೈಲು ಸೌಲಭ್ಯ ಇಲ್ಲದ ಕಾರಣ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳಗಾವಿ ಅಥವಾ ಘಟಪ್ರಭಾ ರೈಲು ನಿಲ್ದಾಣದಿಂದ, ಇಲ್ಲವಾದರೆ ಮಿರಜ್ ರೈಲು ನಿಲ್ದಾಣದಿಂದ ವಿಜಯವಾಡವರೆಗೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸುವಂತೆ ಭಕ್ತರು ಹಾಗೂ ಸಾರ್ವಜನಿಕರು ಬೆಳಗಾವಿ ಹಾಗೂ ಚಿಕ್ಕೋಡಿ ಸಂಸದರು ಮತ್ತು ರಾಜ್ಯ ಸಭಾ ಸದಸ್ಯರು. ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.

ಯುಗಾದಿ ಹಬ್ಬದ ಸಮಯದಲ್ಲಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದರೆ ಭಕ್ತರಿಗೆ ಅನುಕೂಲವಾಗುವುದರ ಜೊತೆಗೆ ಸುರಕ್ಷಿತ ಹಾಗೂ ಸುಲಭ ಪ್ರಯಾಣ ಸಾಧ್ಯವಾಗುತ್ತದೆ. ವಿಶೇಷವಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಕುಟುಂಬ ಸಮೇತ ಪ್ರಯಾಣಿಸುವವರಿಗೆ ಇದು ಬಹಳ ಸಹಾಯಕವಾಗಲಿದೆ ಎಂದು ಭಕ್ತರು ತಿಳಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ರೈಲ್ವೆ ಇಲಾಖೆ ಈ ಕುರಿತು ಗಮನ ಹರಿಸಿ ಯುಗಾದಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಪ್ರಾರಂಭಿಸುವಂತೆ ಸಾರ್ವಜನಿಕರು ಹಾಗೂ ಪತ್ರಕರ್ತ ಉಮೇಶ್ ನಂದಗಾಂವ. ಆಗ್ರಹಿಸಿದ್ದಾರೆ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ ಪ್ರಕರಣ ; ಸಿನಿ ಶೈಲಿಯಲ್ಲಿ ಹುಕ್ಕೇರಿ ಸಬ್ ರಜಿಸ್ಟರ್ ಬಂಧನ

ಹುಕ್ಕೇರಿ: ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಸಬ್ ರಜಿಸ್ಟಾರ್ ಹಾಗೂ ಬಾಂಡ್ ರೈಟರ್ ಪೊಲೀಸರ ಅತಿಥಿಯಾಗಿದ್ದಾರೆ. ಸಬ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ