ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿದಿಸಲು ತೀರ್ಮಾನಿಸಲಾಗಿದೆ.
ಸಿನಿಮಾ ಥಿಯೇಟರ್, ರಂಗಮಂದಿರಗಳನ್ನು ಶೇ. 50ರಷ್ಟು ಜನರೊಂದಿಗೆ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಜುಲೈ.26ರಿಂದ ಉನ್ನತ ಶಿಕ್ಷಣವನ್ನು ಪ್ರಾರಂಭ ಮಾಡಲು ಅವಕಾಶ ನೀಡಲಾಗಿದೆ. ಆದ್ರೇ ಒಂದು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಕಾಲೇಜಿಗೆ ಬರೋದಕ್ಕೆ ಅವಕಾಶ ನೀಡುವಂತ ತೀರ್ಮಾನವನ್ನು ಸಿಎಂ ಯಡಿಯೂರಪ್ಪ ನೇತೃತ್ವದ ಕೋವಿಡ್ ಉಸ್ತುವಾರಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.