Breaking News

ವಿದ್ಯಾರ್ಥಿಗಳು ಭಗೀರಥ ಮಹರ್ಷಿಗಳ ಪ್ರಯತ್ನದಂತೆ ತಾವು ಪ್ರಯತ್ನಶೀಲರಾಗಿ ಸಾಧನೆ ಮಾಡಿ : ಶ್ರೀ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಜೀಮಿಗಳು


ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ಶ್ರೀ ಭಗೀರಥ ಉಪ್ಪಾರ ಸಂಘದ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಆರ್ಶೀವಚನ ನೀಡಿ ಸಾಧನೆ ಸಾಧಕರ ಸ್ವತ್ತು , ಸಾಧನೆಗೆ ಬಡತನ ಅಡ್ಡಿಯಾಗುವದಿಲ್ಲ ವಿದ್ಯಾರ್ಥಿಗಳು ಭಗೀರಥ ಮಹರ್ಷಿಗಳ ಪ್ರಯತ್ನದಂತೆ ತಾವು ಪ್ರಯತ್ನಶೀಲರಾಗಿ ಸಾಧನೆ ಮಾಡಿ ಸಾಧಕರಾಗಿ ತಮ್ಮ ಭವಿಷ್ಯದೊಂದಿಗೆ ಸಮಾಜವನ್ನು ಅಭಿವೃದ್ಧಿ ಪಡಿಸಿ ಎಂದರು

 

ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮಾತನಾಡಿ .ಎಲ್ಲಾ ಸಮುದಾಯದ ಮಕ್ಕಳು ಉತ್ತಮ ಸಾಧಕರಾಗುತ್ತಿದ್ದು, ಅವರ ಮುಂದಿನ ಭವಿಷ್ಯದ ಚಿಂತನೆ ಆಗಬೇಕು ಸಮಾಜದ ಮುಖಂಡರು ಉನ್ನತ ಹುದ್ದೆಯಲ್ಲಿರುವವರು ಅವರ ಭವಿಷ್ಯಕ್ಕೆ ಸಹಕಾರ ನೀಡಬೇಕು. ಸ್ವಾಮೀಜಿ ಅವರ ಹೋರಾಟದಿಂದ ಇಂದು ಸಮಾಜ ಜಾಗೃತವಾಗಿ ರಾಜ್ಯದಲ್ಲಿ ಗುರುತಿಸಿಕೊಳ್ಳುತ್ತಿದೆ ಸಮಾಜ ಭಾಂಧವರು ಸಂಘಟಿತರಾಗಿ ಅವರನ್ನು ಬೆಂಬಲಿಸಬೇಕು.

ನಾವು ನಮ್ಮ ಸಂಸ್ಥೆಯಿಂದ ಉನ್ನತ ಹುದ್ದೆಗಳಿಗೆ, ಕಲಾ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪ್ರತಿಭಾವಂತರಾಗಿ ಮಾಡಲು ತರಬೇತಿ ನೀಡುತ್ತಿದ್ದು, ಸಮಾಜ ಭಾಂಧವರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು .

 

ನಂತರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗಿರೀಶ ಉಪ್ಪಾರ ಅವರು ಮಾತನಾಡಿ ರಾಜ್ಯದ 32 ಕ್ಷೇತ್ರದಲ್ಲಿ ಉಪ್ಪಾರ ಸಮಾಜ ಭಾಂಧವರು ನಿರ್ಣಾಯಕ ಪಾತ್ರ ವಹಿಸುವ ಶಕ್ತಿ ಇದ್ದರು ಸಂಘಟನೆ ಕೋರತೆಯಿಂದ ಸಮಾಜ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಿಲ್ಲ. ಪೂಜ್ಯರ ನೇತೃತ್ವದಲ್ಲಿ ನಾವೆಲ್ಲ ಸಂಘಟಿತರಾಗಿ ಶ್ರಮಿಸೋಣ ಎಂದರು

 

ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ 500 ವಿದ್ಯಾರ್ಥಿ, ವಿದ್ಯಾರ್ಥಿನೀಯರನ್ನು, ಉನ್ನತ ಹುದ್ದೆಯಲ್ಲಿರುವ ಸಮಾಜದ ಅಧಿಕಾರಿಗಳನ್ನು ಸತ್ಕರಿಸಿ, ಗೌರವಿಸಲಾಯಿತು.

 

ವೇದಿಕೆಯಲ್ಲಿ ಕಟಕಭಾಂವಿಯ ಶ್ರೀ ಅಭಿನವ ಧರೇಶ್ವರ ಮಹಾಸ್ವಾಮಿಗಳು , ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ, ಕರ್ನಾಟಕ ಲೋಕಸೆವಾ ಆಯೋಗದ ಮಾಜಿ ಸದಸ್ಯ ಶ್ರೀಕಾಂತರಾವ, ಹಿಂದುಳಿದ ಆಯೋಗದ ಮಾಜಿ ಸದಸ್ಯ ಎಸ್.ಎಂ ಹತ್ತಿಕಟಗಿ ಸೇರಿದಂತೆ ಸಮಾಜದ ಹಿರಿಯರು ಯುವಕರು ಉಪಸ್ಥಿತರಿದ್ದರು.

 

ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಯು . ವೆಂಕೋಬಾ ಕಾರ್ಯಾಧ್ಯಕ್ಷ ಲಕ್ಷ್ಮಣ ಉಪ್ಪಾರ, ಮಾಜಿ ಅಧ್ಯಕ್ಷ ಬಿ.ಆರ್.ಕೋಪ್ಪ, ಜಿಲ್ಲಾಧ್ಯಕ್ಷ ಜಿ.ಎಸ್. ಉಪ್ಪಾರ, ಯುವಕ ಸಂಘಧ ಗೌರವಾಧ್ಯಕ್ಷ ಭರಮಣ್ಣ ಉಪ್ಪಾರ, ಮಹಿಳಾ ಸಂಘದ ಅಧ್ಯಕ್ಷ ಕಮಲಾ ಜೇಡರ, ಯುವಕ ಸಂಘ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಾಶಿ, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷರುಗಳಾದ ಶಿವಪುತ್ರ ಜಕಬಾಳ, ರಾಮಣ್ಣ ಹಂದಿಗುಂದ, ಪದಾಧಿಕಾರಿಗಳಾದ ಕುಶಾಲ ಗುಡ್ಡೇನವರ, ಅಡಿವೆಪ್ಪಾ ಕಿತ್ತೂರ, ವಿಠಲ ಮೆಳವಂಕಿ, ಯಲ್ಲಪ್ಪ ದುರದುಂಡಿ, ವಿಠಲ ಸವದತ್ತಿ, ಪರಸಪ್ಪ ಚೂನನ್ನವರ, ಯಮನಪ್ಪ ಕೌಜಲಗಿ, ನಗರಸಭೆ ಸದಸ್ಯ ಭಗವಂತ ಹುಳಿ, ಗಣ್ಯರಾದ ಸತೀಶ ಕಡಾಡಿ, ಧರ್ಮದರ್ಶಿ ಶಾಮಾನಂದ ಪೂಜೆರಿ, ಭಜರಂಗದಳದ ವಿಭಾಗೀಯ ಸಂಯೋಜಕ ಸದಾಶಿವ ಗುದಗಗೋಳ, ಬಿಇಒಗಳಾದ ಅಜೀತ ಮನ್ನಿಕೇರಿ, ಜಿ‌.ಬಿ.ಬಳಗಾರ, ಅಧಿಕಾರಿಗಳಾದ ಡಾ.ವಿಜಯಕುಮಾರ್ ತೋರಗಲ್, ಲಕ್ಕಪ್ಪ ಹಣುಮನ್ನವರ, ಜಗದೀಶ್ ಗಂಗಣ್ಣವರ, ಲಕ್ಷ್ಮಣ ಬಬಲಿ, ಡಾ‌.ಸಂದೀಪ್ ದಂಡಿನ, ಲಕ್ಷ್ಮಣ ಉಪ್ಪಾರ, ಬಸವರಾಜ ಮೆಳವಂಕಿ, ಆರ್.ಕೆ ಬಿಸಿರೊಟ್ಟಿ, ಎಂ.ಆರ್.ಮುಂಜಿ , ಯಲ್ಲಪ್ಪ ಗದಾಡಿ, ಅಡಿವೇಶ ಗುದಿಗೋಪ್ಪ, ಶಂಕರ ಅಂತಗಟ್ಟಿ, ನಾಗರಾಜ್ ಕಿಲಾರಿ, ಶಿವಾನಂದ ಬಬಲಿ , ಕೃಷ್ಣಾ ಕುಳ್ಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ