ಬೆಂಗಳೂರು : ಖಾಸಗಿ ಶಾಲೆಗಳು ಪೋಷಕರಿಗೆ ಬಿಗ್ ಶಾಕ್ ನೀಡಿದ್ದು, ನವೆಂಬರ್ 30 ರೊಳಗೆ ಶುಲ್ಕ ಪಾವತಿಸದಿದ್ದರೆ ಡಿಸೆಂಬರ್ 1 ರಿಂದ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಶಾಲಾ ಬೋಧಕ-ಬೋಧಕೇತರ ಸಿಬ್ಬಂದಿ, ಶಾಲಾ ಕಟ್ಟಡಗಳ ಬಾಡಿಗೆ, ವಿದ್ಯುತ್ ಬಿಲ್ ಸೇರಿದಂತೆ ಶಾಲಾ ನಿರ್ವಹಣೆ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಗಳು ಪಾವತಿಸಬೇಕಾಗಿದ್ದು, ಪೋಷಕರು ಶುಲ್ಕ ಪಾವತಿಸದಿದ್ದರೆ ಆನ್ ಲೈನ್ ತರಗತಿ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಶಾಲೆಗಳಲ್ಲಿ ಜೂನ್ ತಿಂಗಳಿನಿಂದಲೇ ಆನ್ ಲೈನ್ ತರಗತಿಗಳು ಆರಂಭಗೊಂಡಿದ್ದರೂ ಇಲ್ಲಿಯವರೆಗೆ ಶೇ.
50 ರಿಂದ 60 ರಷ್ಟು ಮಕ್ಕಳು ದಾಖಲಾಗಿಲ್ಲ. ಹೀಗಾಗಿ ಡಿಸೆಂಬರ್ 30 ರೊಳಗೆ ಪೋಷಕರು ಶುಲ್ಕ ಪಾವತಿಸದಿದ್ದರೆ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ.