ಗೋಕಾಕ: ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ ಸರ್ಕಾರ ಅತ್ಯಂತ ಕೆಟ್ಟ ಆಡಳಿತ ನಡೆಸುತ್ತಿದೆ. ಹೀಗಾಗಿ, ಅಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಆದರೂ, ಕೂಡ ಸರ್ಕಾರ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿವೇಕ ಜತ್ತಿ ಎಚ್ಚರಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA