ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.
ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ನಿಂದ ಟಿ ಎ ಶರವಣ ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.