Breaking News

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ಕ್ರಮ-8 ನಗರದಲ್ಲಿ ಕೊರೋನಾ ಕರ್ಫ್ಯೂ


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಕಠಿಣ ನಿಯಮ ಜಾರಿಗೊಳಿಸಲಾಗಿದೆ. 8 ನಗರಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 10 ರಿಂದ 10 ದಿನಗಳ ಕಾಲ ಜಾರಿಯಲ್ಲಿರುತ್ತದೆ.

ಪ್ರಧಾನಿ ಮೋದಿಯವರೊಂದಿಗೆ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ 10 ರಿಂದ 20 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ,-ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೋನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮತ್ತೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ರಾತ್ರಿ ವೇಳೆ ಜನರ ಓಡಾಟಕ್ಕೆ ನಿರ್ಬಂಧ ಇರುತ್ತದೆ. ಮದುವೆ ಸಮಾರಂಭಗಳಿಗೆ ಇತಿ ಮಿತಿ ಇರಬೇಕು. ಜನರು ಹೊರಗೆ ಓಡಾಡುವಂತಿಲ್ಲ.10 ಗಂಟೆಯ ಒಳಗೆ ವ್ಯಾಪಾರ-ವಹಿವಾಟು ಬಂದ್ ಮಾಡಬೇಕು ಎಂದು ಹೇಳಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ