ಬೆಳಗಾವಿ: ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಬೆಳಗಾವಿಯಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕಂದಾಯ ಸಚಿವ ಆರ್ ಅಶೋಕ್, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.